#ಮುನ್ನುಡಿ...
1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ.
#ಬಿ_ರೇಣುಕೇಶ್, ಪತ್ರಕರ್ತರು.
#I have been working in the field of journalism for the last 26 - 27 years. I started @UdayaSaakshi YouTube news channel and www.udayasaakshi.com news website. Please support...
#B_Renukesha, Journalist